ಒಳಮೀಸಲಾತಿಗೆ ವಿರೋಧಿಸಿ ನಿನ್ನೆ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲುತೂರಾಟ ನಡೆಸಿದ ಪ್ರಕರಣ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.
ಘಟನೆ ಸಂಬಂಧ ಬಿಎಸ್ ಯಡಿಯೂರಪ್ಪ ಕೇಸ್ ಹಾಕಬೇಡಿ ಎಂದಿದ್ದಾರೆ. ಆದರೆ ಕೆಲ ಪೊಲೀಸರಿಗೆ ಕಲ್ಲು ತೂರಾಟದಿಂದ ಗಾಯಗಳಾಗಿದೆ. ಹೀಗಾಗಿ ಘಟನೆ ಕುರಿತು ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಿನ್ನೆ ನಡೆದ ಘಟನೆ ಸಂಬಂಧ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಈ ಗಲಾಟೆಯಲ್ಲಿ ಕೆಲವರು ಕ್ರಿಮಿನಲ್ ಹಿನ್ನಲೆಯುಳ್ಳವರು ಇದ್ದಾರೆ. ಶಿಕಾರಿಪುರ ಘಟನೆ ಕುರಿತು ತನಿಖೆ ಮಾಡುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


