ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಈಗಾಗಲೇ ನಮ್ಮ ಬಳಿ ಸರ್ವೆ ವರದಿ ಇದೆ. ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ಅಂತಿಮಗೊಳ್ಳುತ್ತೆ. ಟಿಕೆಟ್ ಫೈನಲ್ ವಿಚಾರದ ದಿನಾಂಕ ಹೇಳಲು ಆಗೋದಿಲ್ಲ ಎಂದರು.
ನಿರೀಕ್ಷೆಯಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ . ನಾನು ಪಕ್ಷದ ಚಟುವಟಿಕೆಗಳಲ್ಲಿ ತೊಡಗುತ್ತೇನೆ. ಪಕ್ಷ ನಡೆಸುವ ರಾಲಿಗಳು ಪ್ರಚಾರಗಳಲ್ಲಿ ಭಾಗವಹಿಸುತ್ತೇನೆ.
ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಹೋಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಯಾರೂ ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ ಡಿಕೆಶಿ ನಮ್ಮ ಪಕ್ಷದ ಕೆಲವರಿಗೆ ಕರೆ ಮಾಡಿ ಪಕ್ಷಕ್ಕೆ ಬರಲು ಆಹ್ವಾನ ನೀಡುತ್ತಿದ್ದಾರೆ . ಕಾಂಗ್ರೆಸ್ ನವರ ಸ್ಥಿತಿ ಹೇಗಿದೆ ಅರ್ಥವಾಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


