ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಭಾರೀ ಗಾಂಜಾ ಬೇಟೆ. ಟ್ರಕ್ ನಲ್ಲಿ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 541 ಕೆಜಿ ಗಾಂಜಾವನ್ನು ಬೆಂಗಳೂರು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ವಶಪಡಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಎನ್‌ಸಿಬಿ ವಶಕ್ಕೆ ಪಡೆದಿದೆ.
ಅಂತಾರಾಜ್ಯ ಡ್ರಗ್ಸ್ ಗ್ಯಾಂಗ್ ಭಾರೀ ಪ್ರಮಾಣದಲ್ಲಿ ಗಾಂಜಾವನ್ನು ಸಂಗ್ರಹಿಸಿ ತರಕಾರಿ ಟ್ರಕ್ ನಲ್ಲಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿರುವ ಬಗ್ಗೆ ಎನ್ ಸಿ ಬಿ ಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ವಾಹನ ತಪಾಸಣೆ ವೇಳೆ 541 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾವನ್ನು ಹೊಂದಿದ್ದ ಟ್ರಕ್ ನೊಂದಿಗೆ ಬಂದಿದ್ದ ಕಾರನ್ನು ಸಹ ಎನ್‌ಸಿಬಿ ವಶಪಡಿಸಿಕೊಂಡಿದೆ.
ಈ ಗ್ಯಾಂಗ್ ಆಂಧ್ರ-ಒರಿಸ್ಸಾ ಗಡಿಯಿಂದ ಗಾಂಜಾವನ್ನು ತಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ತಲುಪಿಸಲು ಯೋಜಿಸುತ್ತಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


