ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಫಿಕ್ಸ್ ಆಗಿದ್ದು ನಿನ್ನೆಯಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಮುಗಿಯುವವರೆಗೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಆದೇಶಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನೀತಿ ಸಂಹಿತೆ ಮುಕ್ತಾಯದವರೆಗೆ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು. ಮೇ 16ರ ಬಳಿಕ ಸಾರ್ವಜನಿಕರು ಶಸ್ತ್ರಾಸ್ತ್ರಗಳನ್ನ ವಾಪಸ್ ಪಡೆಯಬಹುದು ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


