ಬೆಂಗಳೂರು: ಚುನಾವಣಾ ಜ್ವರದ ಮಧ್ಯೆ ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಶುರುವಾಗುತ್ತಿವೆ. ಮೊದಲ ದಿನವಾದ ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ.
ಸುಗಮ ಪರೀಕ್ಷೆಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3305 ಕೇಂದ್ರಗಳಲ್ಲಿ ಏಪ್ರಿಲ್ 15 ರವರೆಗೂ ಪರೀಕ್ಷೆ ನಡೆಯಲಿದೆ. ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇರಲ್ಲ. ಹಿಜಬ್ ಕಾರಣಕ್ಕೆ ಎಕ್ಸಾಂ ಗೈರಾದ್ರೆ ವಿಶೇಷ ಪರೀಕ್ಷೆಗೆ ಅವಕಾಶ ಇಲ್ಲ. ಮತ್ತೆ ಪೂರಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸ್ಮಾರ್ಟ್‍ವಾಚ್, ಮೊಬೈಲ್ ಎಲೆಕ್ಟ್ರಿಕ್ ಉಪಕರಣಗಳ ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೂ ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ ಮಾಡಲಾಗಿದೆ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಎಕ್ಸಾಂ ಮುಗಿಯೋವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


