ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಣೆ ಮಾಡಲಾಗಿತ್ತು.ಆದರೆ ಈ ರಜೆಯನ್ನು ಬದಲಾವಣೆ ಮಾಡಲಾಗಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ದಿನಾಂಕ 21-11-2022ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿತ್ತು ಎಂದಿದ್ದಾರೆ.
ರಾಜ್ಯ ಸರ್ಕಾರದಿಂದ ಪ್ರಕಟಿಸಿದಂತ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಕ್ರಮ ಸಂಖ್ಯೆ 4ರಲ್ಲಿ ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ದಿನಾಂಕ 03-04-2023ರಂದು ನೀಡಲಾಗಿತ್ತು. ಈ ರಜೆಯನ್ನು ದಿನಾಂಕ 04-04-2023ರಂದು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


