ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ ಮತ್ತು ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿರುವ ಆರೋಪ ಹೊತ್ತಿರುವ ರಾಜು ಝಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜು 2021ರ ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ತಮ್ಮ ಸ್ನೇಹಿತನೊಂದಿಗೆ ಕೋಲ್ಕತ್ತಾಗೆ ಹೋಗುತ್ತಿದ್ದ ಸಂದರ್ಭ ಗುಂಡಿಕ್ಕಿ ಕೊಲ್ಲಲಾಗಿದೆ.
ರಾಜು ಝಾ ಮತ್ತು ಅವರ ಸ್ನೇಹಿತ ಕೋಲ್ಕತ್ತಾಗೆ ಹೋಗುತ್ತಿದ್ದಾಗ ಶಕ್ತಿಗಢದಲ್ಲಿ ಕಾರನ್ನು ನಿಲ್ಲಿಸಿದ್ದರು. ಅವರ ಕಾರನ್ನು ಹೆದ್ದಾರಿಯ ಪಕ್ಕ ನಿಲ್ಲಿಸಿದಾಗ ಮತ್ತೊಂದು ಕಾರು ಅದರ ಪಕ್ಕದಲ್ಲಿ ನಿಲ್ಲಿಸಲಾಗಿದ್ದು, ಅದರಲ್ಲಿದ್ದ ದುಷ್ಕರ್ಮಿಗಳು ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


