ನವದೆಹಲಿ: ಮಲೇಷ್ಯಾದಲ್ಲಿ ಪಫರ್ ಮೀನು ತಿಂದು 83 ವರ್ಷದ ಲಿಮ್ ಸಿವ್ ಗುವಾನ್ ಎಂಬ ವೃದ್ಧ ಮಹಿಳೆ ಸಾವನ್ನಪ್ಪಿದ್ದಾರೆ, ಆಕೆಯ ಪತಿ ಕೋಮಾದಲ್ಲಿದ್ದಾರೆ ಎಂದು ನ್ಯೂಯಾರ್ಕ್ ವರದಿ ಮಾಡಿದೆ.
ಈ ವರದಿಯ ಪ್ರಕಾರ, ವೃದ್ಧ ದಂಪತಿಯ ಮಗಳು ಸ್ಥಳೀಯ ಅಂಗಡಿಯಿಂದ ಮೀನು ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಯವಾಗಲು ಅದೇ ಅಂಗಡಿಯಿಂದ ಮೀನು ಖರೀದಿಸುತ್ತಿರುವುದರಿಂದ ಈ ಬಾರಿ ಮೀನು ಕೊಳ್ಳುವ ವೇಳೆ ಗುಣಮಟ್ಟವನ್ನು ಪರಿಶೀಲಿಸಲಿಲ್ಲ ಎನ್ನಲಾಗಿದೆ.
ವರದಿಯ ಪ್ರಕಾರ, ಮಧ್ಯಾಹ್ನದ ಊಟಕ್ಕೆ ಮೀನನ್ನು ಸೇವಿಸಿದ ನಂತರ, ಮಹಿಳೆ ನಡುಗಲು ಮತ್ತು ಉಸಿರಾಟದ ತೊಂದರೆಗಳನ್ನು ಅನುಭವಿಸಲು ಪ್ರಾರಂಭಿಸಿದರು. ಆಕೆಯ ಪತಿಯಲ್ಲಿ ಕೂಡ ಸುಮಾರು ಒಂದು ಗಂಟೆಯ ನಂತರ ಇದೇ ರೀತಿಯ ರೋಗಲಕ್ಷಣಗಳು ಕಂಡುಬಂದವು ಎಂದು ಹೇಳಲಾಗಿದೆ.
ಅ ಸಮಯದಲ್ಲಿ ಅವರ ಮಗ ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೃದ್ಧ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಕೋಮಾದಲ್ಲಿರುವ ಆಕೆಯ ಪತಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


