nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ರವೀಂದ್ರ ಹಂಜಿ ವಿರುದ್ಧ ಕ್ರಮ ಕೈಗೊಳ್ಳಲು ಕಿರಣ ರಜಪೂತ್‌ ಆಗ್ರಹ
    ಜಿಲ್ಲಾ ಸುದ್ದಿ April 5, 2023

    ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ರವೀಂದ್ರ ಹಂಜಿ ವಿರುದ್ಧ ಕ್ರಮ ಕೈಗೊಳ್ಳಲು ಕಿರಣ ರಜಪೂತ್‌ ಆಗ್ರಹ

    By adminApril 5, 2023No Comments2 Mins Read
    kiran rajputh

    Provided by
    Provided by

    ಯಮಕನಮರಡಿ: ಹತ್ತರಗಿ ಗ್ರಾಮದ ಸರ್ವೇ ನಂ. 445 ರಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ಯಮಕನಮರಡಿ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ, ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್‌ ಕೇಸ್‌ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್‌ ಮುಖಂಡ ಕಿರಣ ರಜಪೂತ್‌ ಆಗ್ರಹಿಸಿದರು.

    ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಮಕನಮರಡಿ ಅರ್ಬನ್‌ ಬ್ಯಾಂಕ್‌, ರಾಜೀವ್‌ ಗಾಂಧಿ ಆಸ್ಪತ್ರೆ, ವಿದ್ಯಾ ವರ್ಧಕ್‌ ಸಂಸ್ಥೆ ಹೆಸರಲ್ಲಿ ಒಟ್ಟರೆ 8 ಗುಂಟೆ ಜಾಗ ಸರ್ವೇ ನಂ. 445ರಲ್ಲಿ 1996ರಲ್ಲಿ ಖರೀದಿ ಮಾಡಿದ್ದಾರೆ. ಆದರೆ ಈ ಮೂರು ಸಂಸ್ಥೆಗಳ ಹೆಸರಲ್ಲಿ ಹೆಚ್ಚುವರಿಯಾಗಿ 26 ಗುಂಟೆ ಜಾಗ ಅತಿಕ್ರಮಣ ಮಾಡಿದ್ದಾರೆಂದು ದಾಖಲೆ ಸಮೇತ ಆರೋಪ ಮಾಡಿದರು.

    ಈ ಜಾಗ ಖರೀದಿಸುವಾಗ ಐದು ಜನ ಬಿಡುದಾರರು ಭಾಗವಹಿಸಿದ್ದು, ಅವರ ಗಮನಕ್ಕೆ ಬಾರದೆ ನಕಲಿ ಸಹಿ ಮಾಡಿ 4 ಗುಂಟೆ ಜಾಗವನ್ನು ಖರೀಸಿದ್ದಾರೆ. 2007-2008ರಿಂದ 2023ರವರೆ ಸಾಲಿನಲ್ಲಿ ಇದೇ ಆಸ್ತಿಗೆ ಸಂದಂಧಿಸಿದಂತೆ ಗ್ರಾಪಂಗೆ ತೆರಿಗೆ ಕಟ್ಟಿದ್ದು, 2011-12ರಲ್ಲಿ 4 ಗುಂಟೆ ಜಾಗ ಮಾರಾಟಕ್ಕೆ ಸಹಕಾರ ಇಲಾಖೆಯಿಂದ ಪರವಾನಿಗೆ ಪಡೆದು ಲಿಲಾವು ಮುಖಾಂತರ ಮಾರಾಟ ಮಾಡಿದ್ದೇವೆ ಎಂಬ ದಾಖಲೆಗಳನ್ನು ಸೃಷ್ಟಿಸಿದ್ದಾರೆ. 2018ರಲ್ಲಿ ರಾಜೀವ್‌ ಗಾಂಧಿ ಆಸ್ಪತ್ರೆ ಹೆಸರಿನಲ್ಲಿ ಹತ್ತರಗಿ ಗ್ರಾಪಂನಲ್ಲಿ ದಾಖಲಾಗಿದ್ದ 4 ಗುಂಟೆ ಜಾಗದ ನೋಂದಣಿಯನ್ನು ರದ್ದುಗೊಳಿಸಬೇಕೆಂದು ಪಿಡಿಓಗೆ ಯಮಕನಮರಡಿ ಅರ್ಬನ್‌ ಬ್ಯಾಂಕ್‌ನಿಂದ ಪತ್ರ ಬರೆದಿರುತ್ತಾರೆ. ಒಟ್ಟಾರೇ ರವೀಂದ್ರ ಹಂಜಿಯವರು ಮಾಡಿದ್ದ ಅಕ್ರಮಗಳನ್ನು ತನಿಖೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯಮಕನಮರಡಿ -ಹತ್ತರಗಿ ಗ್ರಾಮಸ್ಥರಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಅತಿಕ್ರಮಣ ಕುರಿತು ಸಬಂಧಪಟ್ಟ ಇಲಾಖೆಗೆ ಹಾಗೂ ಅಧಿಕಾರಿಗಳಿಗೆ ಲಿಖಿತ  ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಕ್ಕೇರಿ ತಹಶೀಲ್ದಾರ್‌, ಪಂಚಾಯತ್‌ ರಾಜ್ಯ ಇಲಾಖೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರದ ಆದೇಶದಂತೆ ಈಗಾಗಲೇ ಸರ್ವೇ ಮಾಡಿಸಲಾಗಿದ್ದು, ಸರ್ಕಾರಿ ಜಾಗ ಅತಿಕ್ರಮಣವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದರು.


    Provided by
    Provided by

    ಈ ಕುರಿತು ಬೆಳಗಾವಿ ಜಿಲ್ಲಾಧಿಕಾರಿಗಳು ಈ ಸರ್ವೇ ನಂ. ವಿವರ ಸಂಗ್ರಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ ಹತ್ತರಗಿ ಗ್ರಾಮದ ಸರ್ವೇ ನಂ 445ರಲ್ಲಿಅನಧಿಕೃತ ಒತ್ತುವರಿಯಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಇದು ನಮ್ಮ ವ್ಯಾಪ್ತಿಗೆ ಬರುವದಿಲ್ಲ ಎಂದು ಒಬ್ಬರ ಮೇಲೆ ಇನ್ನೊಬ್ಬರು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಶೀಘ್ರವೇ ಬಿಜೆಪಿ ಮುಖಂಡ ರವೀಂದ್ರ ಹಂಜಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಇದೇ ವೇಳೆ ಕಿರಣ ರಜಪೂತ್‌, ಸಾಮಾಜಿಕ ಕಾರ್ಯಕರ್ತ ಶಿವಶಂಕರ ಜುಟ್ಟಿ, ವೀರಣ್ಣ ಬಿಸಿರೊಟ್ಟಿ, ರಾಜೇಸಾಬ್ ಅಬ್ದುಲ್ ಗಣಿ ಪಣಿಬಂದ್‌ ಎಚ್ಚರಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.