2018 ಹಾಗೂ 19ರ ಚುನಾವಣೆಗಳಲ್ಲಿ ದಲಿತ ಸಮುದಾಯಗಳನ್ನು ಗಣನೆಗೆ ತೆಗೆದುಕೊಳ್ಳದೆ ಇರುವ ಕಾರಣದಿಂದಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಬೇಕಾಯಿತು. ಆದರೆ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಈ ವಿಷಯ ಚರ್ಚೆ ಮಾಡಿ ನಂತರ ಅದರ ಫಲವೇ ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರು ಎಂದು ಕಾಂಗ್ರೆಸ್ ಎಸ್ ಸಿ ವಿಭಾಗ ರಾಜ್ಯಾಧ್ಯಕ್ಷರಾದ ಆರ್. ಧರ್ಮಸೇನಾ ಹೇಳಿದ್ದಾರೆ.
ರಾಜ್ಯ ಸರ್ಕಾರ ನೀಡಿರುವ ಕೊನೆಯ ಗಳಿಗೆಯಲ್ಲಿ ಮೀಸಲಾತಿ ಬದಲಾವಣೆಗಳ ಕುರಿತು ಮಾತನಾಡುತ್ತಾ ಹಿಂದುಳಿದ ಸಮುದಾಯಗಳಿಗೆ ಹಾಗೂ ದಲಿತ ಸಮುದಾಯಗಳಿಗೆ ಸರ್ಕಾರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದೆ. ಮೀಸಲಾತಿ ಹೆಚ್ಚಳ ಮಾಡುವ ನಿರ್ಣಯಕ್ಕೆ ಸರಕಾರದ ಕಡೆ ಯಾವುದೇ ಆದೇಶ ಪ್ರತಿ ಇಲ್ಲ, ಸದನದಲ್ಲಿ ಚರ್ಚೆಯಾಗಿಲ್ಲ ಇದು ಅಸಂವಿಧಾನಕವಾಗಿ ತೆಗೆದುಕೊಂಡಿರುವ ನಿರ್ಣಯ ಎಂದರು.
ಚುನಾವಣೆ ಗಿಮಿಕ್ ಅನ್ನೋದು ಬಿಟ್ಟರೆ ಬೇರೆ ಏನು ಇಲ್ಲ .ನಿಜವಾಗಲೂ ಸರ್ಕಾರಕ್ಕೆ ಕಾಳಜಿ ಇದ್ದರೆ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಕಾಂಗ್ರೆಸ್ ಪಕ್ಷ ಈಗಾಗಲೇ ಈ ವಿಷಯದ ಕುರಿತು ಕೆಲಸ ಪ್ರಾರಂಭಿಸಿದೆ ಪ್ರಣಾಳಿಕೆ ಅಧ್ಯಕ್ಷರಾದ ಡಾ. ಪರಮೇಶ್ವರಪ್ಪ ಅವರು 10 ಅಂಶಗಳ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅದು ಪ್ರಣಾಳಿಕೆಯಲ್ಲಿ ಸೇರಲಿದೆ ಸದಾಶಿವ ಆಯೋಗ ನೀಡಿರುವಂತಹ ವರದಿಯನ್ನು ಅನುಷ್ಠಾನಗೊಳಿಸಲು ಮುಂದಿನ ದಿನಗಳಲ್ಲಿ ಕೆಲಸ ಮಾಡಲಾಗುವುದು. ಈ ಚುನಾವಣೆಯಲ್ಲಿ ಎಸ್ಸಿ ಎಸ್ಟಿ ಓಬಿಸಿ ಹಾಗೂ ಮೈನಾರಿಟಿ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


