ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು ಬಂಧಿಸುವಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಖತಾರ್ನಾಕ್ ರೌಡಿಶೀಟರ್‌ಗಳಾದ ಮಹಮ್ಮದ್ ಜಬೀವುದ್ದೀನ್, ಮಹಮ್ಮದ್ ಮೆಹತಾಬ್ ಹಾಗೂ ದಿನೇಶ್ ಬಂಧಿತ ರೌಡಿಗಳು. ಈ ಮೂವರ ಮೇಲೆ ಬರೋಬ್ಬರಿ ಅರವತ್ತಕ್ಕೂ ಹೆಚ್ಚು ಕೇಸ್‌ಗಳಿದ್ದು, ಪೊಲೀಸರ ಕೈಗೆ ಸಿಗದಂತೆ ಓಡಾಡುತ್ತಿದ್ದರು. ಇಂತಹವರನ್ನೇ ಟಾರ್ಗೆಟ್ ಮಾಡಿ ಹುಡುಕಾಟ ನಡೆಸಿದ ಸಿಸಿಬಿ ಕೊನೆಗೂ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಗಳೂರು ಸಿಸಿಬಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ನಗರದಲ್ಲಿ ಆ್ಯಕ್ಟಿವ್ ಆಗಿರುವ ರೌಡಿಶೀಟರ್‌ಗಳು, ವಾರೆಂಟ್ ಇದ್ದರೂ ಕೂಡ ಕೋರ್ಟ್‌ಗೆ ಹಾಜರಾಗದೆ ನಾಪತ್ತೆಯಾಗಿರುವ ರೌಡಿಶೀಟರ್‌ಗಳ ಮೇಲೆ ಕಣ್ಣಿಟ್ಟಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಚರಣೆ ನಡೆಸಿದ ಸಿಸಿಬಿ ಪೊಲೀಸರು, ಕಳೆದ ಹತ್ತು ವರ್ಷಗಳಿಂದ ಪೊಲೀಸರ ಕೈಗೆ ಸಿಗದಂತೆ ನಾಪತ್ತೆಯಾಗಿದ್ದ ಮೂವರು ರೌಡಿಶೀಟರ್‌ಗಳನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


