ಇದ್ರೀಷ್ ಪಾಷಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕನಕಪುರದ ಸಾತನೂರು ಬಳಿ ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದರೆ, ಮರುದಿನ ಅಂದರೆ ಏಪ್ರಿಲ್ 1 ರಂದು ಕ್ಯಾಂಟರ್‌ನಲ್ಲಿದ್ದ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದ್ರೀಷ್ ಪಾಷಾ ಅವರ ಮೃತದೇಹ ಸಾತನೂರು ಗ್ರಾಮದ ಬಳಿ ಶವವಾಗಿ ಪತ್ತೆಯಾಗಿದ್ದರು.
ಈ ಕುರಿತು ಪ್ರಕರಣ ದಾಖಲಾಗಿತ್ತು. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನು ಅಲ್ಲಿಂದ ಕರೆತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


