ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.
ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


