ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು.
ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


