ರಾಯಚೂರು: ಬಿಜೆಪಿ ಶಾಸಕನ ಭಾವಚಿತ್ರವಿದ್ದ ಅಂಬುಲೆನ್ಸ್‌ನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸೀಜ್ ಮಾಡಿದ ಪ್ರಕರಣ ದೇವದುರ್ಗದ ಅರಕೇರಾದಲ್ಲಿ ನಡೆದಿದೆ.
ಶಾಸಕ ಶಿವನಗೌಡ ನಾಯಕ್ ಭಾವಚಿತ್ರವಿದ್ದ ಅಂಬುಲೆನ್ಸ್ ಅರಕೆರಾದ ನಾಡಗೌಡ ಆಸ್ಪತ್ರೆ ಬಳಿ ನಿಂತಿತ್ತು. ಈ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಅಂಬುಲೆನ್ಸ್ ವಶಕ್ಕೆ ಪಡೆದಿದ್ದಾರೆ. ಚಾಲಕ ಫಕೀರಯ್ಯ ಹಾಗೂ ಆಂಬ್ಯುಲೆನ್ಸ್ ಮಾಲೀಕ ಹನುಂತರಾಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೇವದುರ್ಗದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕನ ಭಾವಚಿತ್ರವನ್ನು ಅಂಬುಲೆನ್ಸ್‌ನಲ್ಲಿ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


