ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ ವರೆಗೆ ವಿಸ್ತರಿಸಲಾಗಿದೆ.
ಘಾಟ್ ನಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವ ಕಾರಣ ಈ ಮೊದಲು ಏಪ್ರಿಲ್ 5 ರ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.ನಂತರ ಕಾಮಗಾರಿ ವ್ಯತ್ಯಯವಾಗಿರುವುದರಿಂದ ನಿರ್ಬಂಧ ಆದೇಶವನ್ನು ಈಗ ಏ.15 ರ ವರೆಗೆ ವಿಸ್ತರಿಸಲಾಗಿದೆ.
ಆದ್ದರಿಂದ ವಾಹನ ಸವಾರರು ಬೇರೆ ಮಾರ್ಗದ ಮೂಲಕ ಸಂಚರಿಸಬಹುದಾಗಿದೆ. ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು ಕುಂದಾಪುರ ರಸ್ತೆಯ ಮೂಲಕ, ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯ ಮೂಲಕ ಸಂಚರಿಸಬಹುದಾಗಿ ಸೂಚಿಸಲಾಗಿದೆ.
ಹಾಗೆಯೇ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗವಾಗಿ ಸಂಚರಿಸಲು ಅನುಮತಿ ನೀಡಲಾಗಿದೆ , ತೀರ್ಥಹಳ್ಳಿ – ಯಡೂರು – ಹುಲಿಕಲ್ – ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ನಗರ – ಕೊಲ್ಲೂರು – ಕುಂದಾಪುರ ಮಾರ್ಗವಾಗಿ ಹೋಗಬೇಕು ಎಂದು ಸೂಚಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA