ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯಗಳಿಗೆ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಶುಕ್ರವಾರ ಇದರ ಬಗ್ಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.
ಕೋವಿಡ್ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ವಿದ್ದಲ್ಲಿ ಈ ಹಿಂದೆ ಕೋವಿಡ್ ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ.
ಏಪ್ರಿಲ್ 8 ಮತ್ತು9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ. ಏಪ್ರಿಲ್ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆಗಾಗಿ ಮಾಕ್ ಡ್ರಿಲ್ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಆದೇಶಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


