ಬೆಂಗಳೂರು: ಎರಡು ಮಕ್ಕಳ ತಾಯಿಯೊಬ್ಬರು ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, 6 ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಏಪ್ರಿಲ್ 6ರಂದು ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ.
ಈ ಪ್ರಕರಣ ತೀರಾ ವಿಚಿತ್ರವಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿಚಾರಣೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


