ಬೆಂಗಳೂರು: ಅಮುಲ್ ನಲ್ಲಿ, ಕೆಎಂಎಫ್ ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಚುನಾವಣೆ ಹೊತ್ತಿಲಿನಲ್ಲಿ ಪ್ರತಿರೋಧದ ದಾಳವಾಗಿ ಬಳಸಿಕೊಳ್ಳುತ್ತವೆ.
ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು.
ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


