ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಕಾಂಗ್ರೆಸ್‌ನ ಎರಡು ಪಟ್ಟಿಯಲ್ಲಿ 166 ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗಿದೆ. ಜೆಡಿಎಸ್ ತನ್ನ 93 ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಸಹ ಪ್ರಕಟಿಸಿದೆ. ಆದ್ರೆ, ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು(ಏಪ್ರಿಲ್ 10) ಯಾವುದೇ ಕ್ಷಣದಲ್ಲಾದರೂ ಬಿಡುಗಡೆಯಾಗಹುದು.
ಕಳೆದ ಹತ್ತರಿಂದ 15 ದಿನಗಳಿಂದ ಹೈವೋಲ್ಟೇಜ್ ಮೀಟಿಂಗ್ ಮಾಡಿರುವ ನಾಯಕರು, 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನ್ ಹೇಳುತ್ತೆ? ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು, ಟಿಕೆಟ್ ಘೋಷಣೆಗೂ ಮುನ್ನ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.
ಇಂದು ಬೆಳಗ್ಗೆ 9.30ಕ್ಕೆ ದೆಹಲಿಯಲ್ಲಿ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಸಭೆ ನಡೆಸಿದ್ದು , ಬಳಿಕ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಯಕರು ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಟಿಕೆಟ್ ಸಿಗುತ್ತೋ ಇಲ್ವೋ ಎಂದು ಆಕಾಂಕ್ಷಿಗಳಿಗೆ ಎದೆ ಡವ ಡವ ಅಂತಿದ್ರೆ, ಇನ್ನು ಕೆಲ ಹಾಲಿ ಶಾಸಕರು ಎಲ್ಲಿ ಈ ಬಾರಿ ಟಿಕೆಟ್ ಕೈತಪ್ಪುತ್ತೋ ಎನ್ನುವ ಆತಂಕದಲ್ಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


