ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


