ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಎಂಪಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್ ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು(ಏಪ್ರಿಲ್ 13) ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಪಿ.ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


