ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ನಿಷೇಧಿಸಲಾಗಿದೆ.
ರಾಜಕೀಯ ಪಕ್ಷಗಳ ಮೆರವಣಿಗೆ , ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆಯಿರುವ ಪುಸ್ತಕ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರ ಹಂಚುವುದು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


