ಇಂದು ರಾಷ್ಟ್ರೀಯ ಜಲ ದಿನ. ಡಾ. ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನವನ್ನು ದೇಶದಲ್ಲಿ ಜಲ ದಿನವನ್ನಾಗಿ ಆಚರಿಸಲಾಗುತ್ತದೆ.
ಜಲಸಂಪನ್ಮೂಲ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯನ್ನು ಏಪ್ರಿಲ್ 14ರಂದು ರಾಷ್ಟ್ರೀಯ ಜಲ ದಿನವನ್ನಾಗಿ ಆಚರಿಸಲು 2016ರಲ್ಲಿ ಅಂದಿನ ಕೇಂದ್ರ ಸಚಿವ ಸಂಪುಟ ನಿರ್ಧರಿಸಿತ್ತು.
ಅಂದಿನ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರು ಈ ಕುರಿತು ಘೋಷಣೆ ಮಾಡಿದ್ದರು. ಅಂಬೇಡ್ಕರ್ ಅವರ ಜನ್ಮದಿನದಂದು ಅಮೂಲ್ಯವಾದ ಜಲಸಂಪನ್ಮೂಲ ನಿರ್ವಹಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಲೋಚನೆ ಇದೆ.
ಅಂಬೇಡ್ಕರ್ ಅವರ ಪಾತ್ರ ಸಂವಿಧಾನ ರಚನೆಯಲ್ಲಿ ಮಾತ್ರವಲ್ಲ. ದೇಶದ ಜಲಸಂಪನ್ಮೂಲ ನಿರ್ವಹಣೆಗಾಗಿ ಅಖಿಲ ಭಾರತ ನೀತಿಯನ್ನು ರೂಪಿಸುವಲ್ಲಿ ಅಂಬೇಡ್ಕರ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಅಂಬೇಡ್ಕರ್ ಅವರು ಹಿರಾಕುಡ್ ಸೇರಿದಂತೆ ಯೋಜನೆಗಳ ಮುಖ್ಯ ಯೋಜಕರೂ ಆಗಿದ್ದರು. 1942-46ರ ಅವಧಿಯಲ್ಲಿ ದೇಶದ ಜಲಸಂಪನ್ಮೂಲವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಲು ಹೊಸ ಜಲವಿದ್ಯುತ್ ನೀತಿಯನ್ನು ರೂಪಿಸುವಲ್ಲಿ ಅಂಬೇಡ್ಕರ್‌ರ ಕೊಡುಗೆ ಅಮೂಲ್ಯವಾದುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


