ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ಉಡುಪಿ, ಕೊಡಗು, ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಧಾರವಾಡ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿಯಲ್ಲಿ ಗುರುವಾರ ದಾಖಲೆಯ 41.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ಈ ಬಾರಿಯ ಬೇಸಿಗೆಯಲ್ಲಿ ರಾಜ್ಯದಲ್ಲಿ ದಾಖಲಾದ ಅತಿ ಹೆಚ್ಚು ಉಷ್ಣಾಂಶ ಎಂದು ಹೇಳಲಾಗಿದೆ. ರಾಯಚೂರಿನಲ್ಲಿ ತಾಪಮಾನ 40 ಡಿಗ್ರಿ ಏರಿಕೆಯಾಗಿದೆ.
ಮಳೆ ಉಂಟಾದ ಹಿನ್ನೆಲೆಯಲ್ಲಿ ಒಂದೆರಡು ದಿನ ಉಷ್ಣಾಂಶದಲ್ಲಿ ಇಳಿಕೆಯಾಗಿತ್ತು. ಇದೀಗ ಮತ್ತೆ ಉಷ್ಣಾಂಶದಲ್ಲಿ ಏರಿಕೆಯಾಗಿದೆ ಗುರುವಾರದಿಂದ ಈ ವರೆಗಿನ ಬೇಸಿಗೆಯ ಅತಿಹೆಚ್ಚು ಉಷ್ಣಾಂಶ ದಾಖಲಾಗಿದೆ ಎಂದು ಹೇಳಬಹುದು. ಕಳೆದ ಏಪ್ರಿಲ್ 5 ರಿಂದ ಏ.11 ರ ಅವಧಿಯಲ್ಲಿ ಒಟ್ಟು 6 ದಿನ 40 ಡಿಗ್ರಿಗೂ ಅಧಿಕ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


