ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಆದಷ್ಟು ಬೇಗನೆ ಪ್ರಕಟಿಸುವ ಸಲುವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯ ಮಾಪನವನ್ನು ಇನ್ನಷ್ಟು ಚುರುಕು ಮಾಡಿದೆ. ಅಂದರೆ ಮೌಲ್ಯ ಮಾಪನಕ್ಕೆ ಶಿಕ್ಷಕರ ಕೊರತೆ ಇದ್ದ ಕಾರಣ ಪದವಿ ಪೂರ್ವ ಶಿಕ್ಷಣ ಇಲಾಖೆಯು ಖಾಸಗಿ ಶಿಕ್ಷಕರ ನೇಮಕವನ್ನು ಮಾಡಿಕೊಂಡು ಮೌಲ್ಯ ಮಾಪನವನ್ನು ಮಾಡಲಿದೆ. ಮೌಲ್ಯ ಮಾಪನ ಮುಗಿದರೆ ಆದಷ್ಟು ಬೇಗನೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.
ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮೊದಲು ತಿಳಿಸಿದ ಹಾಗೆ ಏಪ್ರಿಲ್ ಮೂರನೇ ವಾರ ಅಥವಾ ಕೊನೆಯ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮುಂದಿನ ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಲಾಗಿದೆ.
ಆದರೆ ಈ ಬಾರಿಯು ಸಹ ಯಾವುದೇ ರೀತಿಯ ನಿಗದಿತ ದಿನಾಂಕವನ್ನು ಶಿಕ್ಷಣ ಇಲಾಖೆ ಸೂಚಿಸಿರುವುದಿಲ್ಲ. ಏಕೆಂದರೆ ಮೇ ಎರಡನೇ ವಾರದಲ್ಲಿ ಚುನಾವಣೆ ಮತ್ತು ಜೂನ್ 1 ರಿಂದ ಶಾಲಾ ಕಾಲೇಜು ಪ್ರಾರಂಭವಾಗುವುದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮೇ ಮೊದಲ ವಾರದಲ್ಲೆ ಫಲಿತಾಂಶವನ್ನು ಪ್ರಕಟಿಸಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


