ಗೋಕಾಕ್: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ.
6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ.
ಇದೀಗ 4 ಮಂದಿಯ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


