ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬಾಂಬ್ ದಾಳಿ ನಡೆಸಲಾಯಿತು. ಪ್ರಧಾನಿ ಮಾತನಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಪೈಪ್‌ನಂತಹ ವಸ್ತುವನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ.
ಕೂಡಲೇ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.ಶನಿವಾರ ವಕಯಾಮಾದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸ್ಫೋಟದ ರೀತಿಯ ಸದ್ದು ಕೇಳಿಬಂದಿದೆ. ವರದಿಯ ಪ್ರಕಾರ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಉಪಚುನಾವಣೆಯ ಅಧಿಕೃತ ಪ್ರಚಾರದ ಭಾಗವಾಗಿ ಪ್ರಧಾನಿಯವರ ಭಾಷಣವಾಗಿತ್ತು. ದಾಳಿಯ ಹಿನ್ನೆಲೆಯಲ್ಲಿ ಕಿಶಿದಾ ಅವರ ಭಾಷಣವನ್ನು ರದ್ದುಗೊಳಿಸಲಾಗಿದೆ.
ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಹೊರಬಿದ್ದಿರುವ ವೀಡಿಯೋಗಳಲ್ಲಿ ಪೊಲೀಸರು ಗುಂಪಿನಲ್ಲಿದ್ದವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


