ಕಾರವಾರ : ಪಕ್ಷಕ್ಕಾಗಿ ದುಡಿದ ನನಗೆ ಟಿಕೆಟ್ ತಪ್ಪಿಸಿ ತುಂಬಾ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಶಾಸಕಿ, ಕುಮಟಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾರದಾ ಶೆಟ್ಟಿ ದುಃಖಿತರಾಗಿ ಹೇಳಿಕೊಂಡಿದ್ದಾರೆ.
ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಕಾರವಾರ ಕ್ಷೇತ್ರಕ್ಕೆ ಮಾಜಿ ಸಚಿವ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾ ಅವರಿಗೆ ಟಿಕೆಟ್ ನೀಡಲಾಗಿದೆ.
ಕಳೆದ 25 ವರ್ಷಗಳಿಂದ ನಮ್ಮ ಯಜಮಾನರು (ಮೋಹನ್ ಶೆಟ್ಟಿ), ಅವರ ಬಳಿಕ ನಾನು, ಮಕ್ಕಳೆಲ್ಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ್ದೆವು. ನಾನು ಒಮ್ಮೆ ಶಾಸಕಿಯಾಗಿದ್ದೆ, ಆದರೆ ಕಳೆದ ಚುನಾವಣೆಯಲ್ಲಿ ಸೋತಿದ್ದೆ ಎಂದಿದ್ದಾರೆ. ಐದು ವರ್ಷ ಅಧಿಕಾರದಲ್ಲಿರುವಾಗ ಸುಮ್ಮನೆ ಕೂರದೆ ಐದು ವರ್ಷಗಳ ಕಾಲ ಪಕ್ಷ ಸಂಘಟನೆಗಾಗಿ, ಕಾರ್ಯಚಟುವಟಿಕೆಗಳಿಗಾಗಿ ದುಡಿದಿದ್ದೆ ಎಂದು ಹೇಳಿದರು.
ಕಾಂಗ್ರೆಸ್ ಗೆ ಗೆಲುವಿನ ವೇದಿಕೆ ಕಟ್ಟಿಕೊಟ್ಟಿದ್ದೆ. ಹೀಗಾಗಿ ನನಗೆ ನಂಬಿಕೆ ಇತ್ತು ನನಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಡುತ್ತಾರೆ ಎಂದು ಆದರೆ ಆ ನಂಬಿಕೆ ಸುಳ್ಳಾಗಿದ್ದು, ತುಂಬಾ ಬೇಸರವಾಗಿದೆ ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಹೇಳಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


