ಬೆಂಗಳೂರು: ಕೆಜೆಪಿ ಕಟ್ಟಿದ್ದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ. ಈ ಕುರಿತಾಗಿ ನಾನು ಹಿಂದೆ ಜನರಿಗೆ ಕ್ಷಮೆ ಕೇಳಿದ್ದೇನೆ ಎಂದು ಬಿ.ಎಸ್ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿವೃತ್ತಿಯಾಗಿ ಅಂತಾ ಜಗದೀಶ್ ಶೆಟ್ಟರ್ಗೆ ಯಾರೂ ಹೇಳಿಲ್ಲ. ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಆದರೂ ಅವರು ಬಿಜೆಪಿ ಬಿಟ್ಟಿದ್ದಾರೆ. ಜನ ಅವರನ್ನ ಕ್ಷಮಿಸಲ್ಲ. ನಾನು ಅವರೊಂದಿಗೆ ಎರಡು ಮೂರು ಸಲ ಮಾತಾಡಿದೆ. ಯಾರೇ ಪಕ್ಷ ಬಿಟ್ಟರೂ ನಮಗೆ ಸಮಸ್ಯೆ ಆಗಲ್ಲ. ಅಧಿಕಾರಕ್ಕೆ ಬಂದಾಗ ಸವದಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರ ಬಣ್ಣ ಬಯಲು ಮಾಡುತ್ತೇನೆ ಎಂದು ವಾಗ್ದಾಳಿ ಮಾಡಿದರು.
ನನಗೆ 80 ವರ್ಷ ಆಗಿದೆ. ನಾನಿನ್ನೂ ಗಟ್ಟಿ ಇದ್ದೇನೆ. ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲೂ ಸುತ್ತಿ ಪಕ್ಷ ಗೆಲ್ಲುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ನನ್ನ ಸಂಪೂರ್ಣ ಬದುಕನ್ನು ಬಿಜೆಪಿ, ದೇಶಕ್ಕೆ ಮುಡಿಪಿಟ್ಟಿದ್ದೇನೆ. BJP ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಈ ಚುನಾವಣೆಯಲ್ಲಿ ಹೊಸಮುಖಗಳಿಗೆ ಅವಕಾಶ ಕೊಟ್ಟಿದ್ದೇವೆ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಮೀಸಲಾತಿ ಹೆಚ್ಚಿಸಿ ಅನೇಕ ದಶಕಗಳ ಬೇಡಿಕೆ ಈಡೇರಿಸಿದ್ದೇವೆ. ಬಿಜೆಪಿ ಸಾಮಾಜಿಕ ನ್ಯಾಯ ಪಾಲನೆ ಮಾಡಿದೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


