ನಿಪ್ಪಾಣಿ: ನಿಪ್ಪಾಣಿ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಶಶಿಕಲಾ ಜೊಲ್ಲೆ ಸೋಮವಾರ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ಜಿ.ಎನ್. ಮಂಜುನಾಥಸ್ವಾಮಿ ಅವರಿಗೆ ಸೋಮವಾರ ಸಲ್ಲಿಸಿದದರು.
ಸ್ಥಳೀಯ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮತದಾರರ ಆಶಿರ್ವಾದದಿಂದ ಎರಡು ಬಾರಿ ಶಾಸಕಿಯಾದೆ. ರಾಜ್ಯ ರಾಜಕಾರಣದವರೆಗೆ ಬೆಳೆಸಿರುವ ನನ್ನ ಕ್ಷೇತ್ರದ ಜನಬಾಂಧವರ ಪ್ರೀತಿ, ವಿಶ್ವಾಸ, ಬೆಂಬಲಕ್ಕೆ ನಾನು ಸದಾ ಚಿರಋಣಿಯಾಗಿರುವೆ. ಸಾಂಸ್ಕೃತಿಕ, ಕ್ರೀಡೆ ಮೊದಲಾದ ಎಲ್ಲ ಕ್ಷೇತ್ರಗಳ ಸಹಾಯದಿಂದ ಯುವಜನರು, ಮಹಿಳೆಯರಿಗೆ ಹಾಗೂ ಪುರುಷರು ಎಲ್ಲ ಕ್ಷೇತ್ರದಲ್ಲಿ ಮೆರೆಯಬೇಕೆನ್ನುವ ಹಂಬಲದಿಂದ ಶ್ರಮಿಸಿದ್ದೇನೆ. ಮತದಾರರು ನನ್ನನ್ನು ಮತ್ತೊಮ್ಮೆ ಆಶೀರ್ವದಿಸಿ ಬೆಂಬಲಿಸುವರು’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಯಾಧ್ಯಕ್ಷ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ, ಸಂಚಾಲಕ ಪಪ್ಪುಅಣ್ಣಾ ಪಾಟೀಲ, ಸ್ಥಳೀಯ ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಸ್ಥಾಯಿ ಸಮಿತಿ ಚೇರ್ಮನ್ ರಾಜೇಂದ್ರ ಗುಂದೇಶಾ, ಬಿಜೆಪಿ ಪಕ್ಷದ ನಗರ ಘಟಕದ ಅಧ್ಯಕ್ಷ ಪ್ರಣವ ಮಾನವಿ, ಗ್ರಾಮೀಣ ಘಟಕದ ಅಧ್ಯಕ್ಷ ಪವನ ಪಾಟೀಲ, ಮಹಿಳಾ ಮೋರ್ಚಾ ನಗರ ಘಟಕದ ಅಧ್ಯಕ್ಷೆ ವಿಭಾವರಿ ಖಾಂಡಕೆ, ಗ್ರಾಮೀಣ ಘಟಕದ ಅಧ್ಯಕ್ಷೆ ಸರೋಜಿನಿ ಜಮದಾಡೆ, ಸುಹಾಸ ಗೂಗೆ, ಸಿದ್ದು ನರಾಟೆ, ಸುರೇಶ ಪಾಟೀಲ, ಸುರೇಶ ಶೆಟ್ಟಿ, ಅಭಯ ಮಾನವಿ ಮೊದಲಾದವರು ಸೇರಿದಂತೆ ಹಲವಾರು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


