ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮೆಳೆಕೋಟೆ ಕೆರೆಯಿಂದ ಹಗಲು ರಾತ್ರಿ ಎನ್ನದೇ ನಿರಂತರವಾಗಿ ಅಕ್ರಮ ಮಣ್ಣು ಸಾಗಾಟ ನಡೆಯುತ್ತಿದ್ದು, ಇದರಿಂದಾಗಿ ಇಲ್ಲಿನ ನಾಗರಿಕರು ತೊಂದರೆಗೀಡಾಗಿದ್ದಾರೆ.
ಘಟನೆ ಸಂಬಂಧ ಇಲ್ಲಿನ ನಾಗರಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ನಿಗದಿತ ಮಿತಿಗಿಂತಲೂ ಅಧಿಕವಾದ ಭಾರವಾದ ಟಿಪ್ಪರ್, ಟ್ರ್ಯಾಕ್ಟರ್, ಬೃಹತ್ ಲಾರಿಗಳಲ್ಲಿ ಅಪಾರವಾದ ಮಣ್ಣುಗಳನ್ನು ಸಾಗಿಸಲಾಗುತ್ತಿದೆ. ಇದರಿಂದಾಗಿ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಇನ್ನೂ ಈ ಬಗ್ಗೆ ನಾವು ಮಣ್ಣು ಸಾಗಿಸುತ್ತಿದ್ದ ಲಾರಿ ಚಾಲಕರ ಬಳಿ ಪ್ರಶ್ನಿಸಿದ್ದು, ಈ ವೇಳೆ ಅವರು ನಮಗೆ ಬೆದರಿಕೆ ಹಾಕಿ, ಮತ್ತೆ ನಿರಂತರವಾಗಿ ಮಣ್ಣು ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ತಕ್ಷಣವೇ ಅಕ್ರಮ ಮಣ್ಣ ಸಾಗಾಟವನ್ನು ನಿಲ್ಲಿಸಿ, ವಾಹನ ಚಾಲಕರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


