ಮಹಾರಾಷ್ಟ್ರದ ಥಾಣೆಯಲ್ಲಿರುವ ಸಿನಿ ವಂಡರ್ ಮಾಲ್ ಬಳಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಥಾಣೆಯ ಓರಿಯನ್ ಬಿಸಿನೆಸ್ ಪಾರ್ಕ್‌ನ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಸಿದೆ. ರಾತ್ರಿ 8.37ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಗೊತ್ತಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ಎಲ್ಲ ಕಾರುಗಳು ಸುಟ್ಟು ಕರಕಲಾಗಿವೆ. ಸಿಎನ್‌ಜಿ ಕಾರ್ ಕೂಡ ಬೆಂಕಿಯಲ್ಲಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ಬೆಂಕಿ ಕಾಣಿಸಿಕೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಪ್ರಾದೇಶಿಕ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಅವಿನಾಶ್ ಸಾವಂತ್, ಯಾವುದೇ ಗಾಯಗಳ ವರದಿಯಾಗಿಲ್ಲ ಎಂದು ಹೇಳಿದ್ದಾರೆ.
ಮಾಲ್‌ನಿಂದ ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


