ತುರುವೇಕೆರೆ: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಮಸಾಲ ಜಯರಾಮ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ.
ತುರುವೇಕೆರೆ ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ, ಚುನಾವಣಾ ಅಧಿಕಾರಿ ಕೆ.ಎಸ್.ಮಂಜುನಾಥ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ವೈ.ಎಂ.ರೇಣು ಕುಮಾರ್ ರವರಿಗೆ ಶಾಸಕ ಮಸಾಲ ಜಯರಾಮ್ ನಾಮಪತ್ರ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ದಿನಾಂಕ ಪ್ರಕಟವಾದ ದಿನದಿಂದಲೂ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯವನ್ನು ಕೈಗೊಂಡಿದ್ದೇನೆ, ಹೆಚ್ಚಿನ ಕಾರ್ಯಕರ್ತರು, ಮುಖಂಡರು ಬಿಜೆಪಿ ಪಕ್ಷದ ಕಡೆ ಒಲವು ತೋರಿಸಿದ್ದಾರೆ. ಅನ್ಯ ಪಕ್ಷಗಳನ್ನು ತೊರೆದು ನಮ್ಮ ಪಕ್ಷದ ಕಡೆ ಮುಖ ಮಾಡಿದ್ದಾರೆ, ಅವರೆಲ್ಲರಿಗೂ ಸ್ವಾಗತವನ್ನು ಕೋರುತ್ತೇನೆ, ನಾನು ಶಾಸಕನಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದರು.
ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತದಾರ ಪ್ರಭುಗಳು ಈ ಬಾರಿಯ ಚುನಾವಣೆಯಲ್ಲಿ 20,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಮತದಾರರು ಆಶೀರ್ವಾದಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಕೊಂಡಜ್ಜಿ ವಿಶ್ವನಾಥ್, ದುಂಡ ರೇಣುಕಪ್ಪ, ಅರಳಿಕೆರೆ ಸ್ವಾಮಿ, ವಿ.ಟಿ.ವೆಂಕಟರಾಮ, ಪ್ರಭಾಕರ್, ವೆಂಕಟೇಶ್ ಕೋಳಿ ಮುಂತಾದವರು ಇದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA