ನವದೆಹಲಿ: ಗ್ರಾಮೀಣ ಮಹಿಳೆಯರನ್ನು ಸ್ವಸಹಾಯ ಗುಂಪುಗಳಿಗೆ ತರಲು ಸರ್ಕಾರವು ‘ಸಂಘಟನ್ ಸೇ ಸಮೃದ್ಧಿ’ ಯೋಜನೆಯನ್ನು ಪ್ರಾರಂಭಿಸಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರು ‘ಸಂಘಟನ್ ಸೇ ಸಮೃದ್ಧಿ’ ಅಭಿಯಾನಕ್ಕೆ ಇಂದು ಚಾಲನೆಯನ್ನು ನೀಡಿದರು.
ಇದು ಎಲ್ಲಾ ಅರ್ಹ ಗ್ರಾಮೀಣ ಮಹಿಳೆಯರನ್ನು ಸ್ವಸಹಾಯ ಗುಂಪುಗಳಿಗೆ ತರುವ ಮೂಲಕ ಬಡತನದಲ್ಲಿರುವ ಗ್ರಾಮೀಣ ಕುಟುಂಬಗಳನ್ನು ಸಬಲಗೊಳಿಸುತ್ತದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಈಗಿರುವ 10 ಕೋಟಿ ಮಹಿಳೆಯರನ್ನು ಸ್ವಸಹಾಯ ಸಂಘಗಳ ವ್ಯಾಪ್ತಿಗೆ ತರುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಿದ್ದಾರೆ.
ಮೇ 2014ರಲ್ಲಿ ಕೇವಲ 2.35 ಕೋಟಿ ಇದ್ದ ಸದಸ್ಯರ ಸಂಖ್ಯೆ ಈಗ 9 ಕೋಟಿ ದಾಟಿದೆ. ಸ್ವಸಹಾಯ ಸಂಘಗಳಿಗೆ ಸಂಬಂಧಿಸಿದ ಪ್ರತಿಯೊಬ್ಬ ಮಹಿಳೆಯು ವರ್ಷಕ್ಕೆ ಒಂದು ಲಕ್ಷ ರೂಪಾಯಿಗಳನ್ನು ಗಳಿಸಬೇಕು ಎಂಬ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


