ತುರುವೇಕೆರೆ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿದ್ದ ಗಾಯಾಳುವನ್ನು ತುರುವೇಕೆರೆ ಶಾಸಕ ಮಸಾಲ ಜಯರಾಮ್ ಅವರ ಪುತ್ರ ತೇಜು ಜಯರಾಮ್ ಅವರು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತೇಜು ಜಯರಾಮ್ ರವರು, ಬೆಂಗಳೂರಿನಿಂದ ತುರುವೇಕೆರೆ ಪಟ್ಟಣಕ್ಕೆ ಆಗಮಿಸುವ ವೇಳೆಯಲ್ಲಿ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ರಸ್ತೆಯ ಬದಿಯಲ್ಲಿ ಬಿದ್ದು ನರಳಾಡುತ್ತಿರುವುದನ್ನು ಕಂಡಿದ್ದಾರೆ.
ತಕ್ಷಣವೇ ತಮ್ಮ ಸಹೋದರನ ಕಾರಿನಲ್ಲಿ ಗಾಯಾಳುವನ್ನು ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳಿಸಿಕೊಟ್ಟು ಮಾನವಿಯತೆಯನ್ನು ಮೆರೆದಿದ್ದಾರೆ.
ತೇಜು ಜಯರಾಮ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ತಂದೆಯ ಹಾಗೆಯೇ ಹೃದಯವಂತ ಮಗ ಎಂದು ಅಭಿಪ್ರಾಯಪಟ್ಟರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy