ಇಂದು ರಾಹುಲ್ ಗಾಂಧಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ತೀರ್ಪಿಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯ ಕುರಿತು ಸೂರತ್ ಸೆಷನ್ಸ್ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ.
ಎರಡೂ ಕಡೆಯ ವಾದ ಆಲಿಸಿದ ಬಳಿಕ ಮೇಲ್ಮನವಿಯ ತೀರ್ಪನ್ನು ಏಪ್ರಿಲ್ 20ರಂದು ಪ್ರಕಟಿಸಲಾಗುವುದು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಪಿ. ಮೊಗೇರ ಮಾಹಿತಿ ನೀಡಿದರು.
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಶಿಕ್ಷೆಯ ಅನುಷ್ಠಾನಕ್ಕೆ ಸೆಷನ್ಸ್ ಕೋರ್ಟ್ ತಡೆ ನೀಡಿತ್ತು. ಆದರೆ ಶಿಕ್ಷೆಗೆ ತಡೆ ನೀಡಿದರೆ, ಕಳೆದುಹೋದ ಸಂಸದ ಸ್ಥಾನವನ್ನು ರಾಹುಲ್ ಮರಳಿ ಪಡೆಯಲಿದ್ದಾರೆ.
2019 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾಡಿದ ಹೇಳಿಕೆಗಳಿಗಾಗಿ ಮಾರ್ಚ್ 23 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್‌ಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.
ಎಲ್ಲಾ ಕಳ್ಳರ ಹೆಸರಲ್ಲಿ ‘ಮೋದಿ’ ಹೇಗೆ ಬರುತ್ತಾರೆ ಎಂಬ ರಾಹುಲ್ ಹೇಳಿಕೆಯಿಂದ ಪ್ರಕರಣಕ್ಕೆ ಕಾರಣವಾಯಿತು.ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


