ತುರುವೇಕೆರೆ: ಪಟ್ಟಣದ ತಾಲೂಕು ಕಚೇರಿಯಲ್ಲಿ ಆರ್ ಪಿ ಐ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಟ್ಟಪ್ಪ ಅಲಿಯಾಸ್ ನಾಗರಾಜು ಇತ್ತೀಚೆಗೆ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ತುರುವೇಕೆರೆ ಪಟ್ಟಣದ ಗ್ರಾಮ ದೇವತೆ ಉಡುಸಲಮ್ಮ ದೇವಿಗೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಸೇರಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಬಳಿಕ ಮೆರವಣಿಗೆಯ ಮೂಲಕ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿರುವ ಚುನಾವಣಾ ಕೊಠಡಿಗೆ ತೆರಳಿ ಚುನಾವಣಾ ಅಧಿಕಾರಿಗಳಾದ ಮಂಜುನಾಥ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳಾದ ವೈ ಎಂ ರೇಣು ಕುಮಾರ್ ರವರಿಗೆ ನಾಮಪತ್ರವನ್ನು ಅಧಿಕೃತವಾಗಿ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದ ಅಧ್ಯಕ್ಷರಾದ ಎನ್.ಮೂರ್ತಿಯವರು ನನ್ನನ್ನು , ತುರುವೇಕೆರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ, ಬಿ.ಫಾರಂ ನೀಡಿದ್ದಾರೆ, ನಾನು ಯಾವುದೇ ಜಾತಿ ಮತ ಭೇದವಿಲ್ಲದೆ ತಾಲೂಕಿನಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳನ್ನು , ಜನರ ನೋವು ನಲಿವುಗಳಲ್ಲಿ ಭಾಗಿಯಾಗಿ ಕಷ್ಟಗಳನ್ನು ಅರಿತಿದ್ದೇನೆ ಎಂದರು.
ನಾವು ಜಿಲ್ಲೆಯ 11 ತಾಲೂಕುಗಳಲ್ಲೂ ಪಕ್ಷ ಸಂಘಟನೆಯನ್ನು ಮಾಡಿದ್ದೇವೆ, ಸಾರ್ವಜನಿಕರಿಗೆ ಸರ್ಕಾರದಿಂದ ಏನೇನು ಸವಲತ್ತುಗಳು ಸಿಗಬೇಕೋ ಅವುಗಳನ್ನು ದೊರಕಿಸುವ ನಿಟ್ಟಿನಲ್ಲಿ ಸರ್ವ ಪ್ರಯತ್ನವನ್ನು ಮಾಡಲಿದ್ದೇವೆ ,ಇದರಿಂದ ತಾಲ್ಲೂಕಿನ ಮತದಾರರು ನಮ್ಮ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದರು.
ಈ ಸಂದರ್ಭದಲ್ಲಿ ಡಿ ಎಸ್ ಎಸ್ ನ ಜಿಲ್ಲಾಧ್ಯಕ್ಷರಾದ ಪಿ ಎನ್ ರಾಮಯ್ಯ , ನೆಲ್ಲಿಕೆರೆ ಪುಟ್ಟಸ್ವಾಮಿ, ಡೊಂಕಿಹಳ್ಳಿ ರಾಮಣ್ಣ. ಬುಗುಡನಹಳ್ಳಿ ರವೀಶ್ . ಕಿರಣ್ ಕುಮಾರ್ , ಮಾದಿಹಳ್ಳಿ ಚಂದ್ರು ಮತ್ತಿತರರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy