ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಐವರು ಯೋಧರು ಹುತಾತ್ಮರಾದ ಉಗ್ರರ ದಾಳಿಯ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದೆ.
ಘಟನೆಯು ಭಯೋತ್ಪಾದಕ ದಾಳಿ ಎಂದು ಸೇನೆಯು ದೃಢಪಡಿಸಿದ ನಂತರ ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಭಯೋತ್ಪಾದನಾ ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಡಿ ನಿಯಂತ್ರಣ ರೇಖೆ ಬಳಿ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ದಾಳಿ ನಡೆದಿದೆ. ವಾಹನವು ಬಿಂಬರ್ ಗಲಿಯಿಂದ ಪೂಂಚ್ ಕಡೆಗೆ ಬರುತ್ತಿತ್ತು. ಭಯೋತ್ಪಾದಕರ ಗ್ರೆನೇಡ್ ದಾಳಿಯಿಂದಾಗಿ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎನ್‌ಐಎ ತಂಡ ನಿನ್ನೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ಜಿ20 ಅಂಗವಾಗಿ ನಡೆದ ಘಟನೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದಾಳಿ ನಡೆಸಿದ ಉಗ್ರರಿಗಾಗಿ ಸೇನೆ ಇನ್ನೂ ಶೋಧ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪೂಂಚ್‌ನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


