ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದ್ದು, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಹಿಗ್ಗಾಮುಗ್ಗಾ ಥಳಿಸಿದ ಆರೋಪ ಕೇಳಿ ಬಂದಿದೆ.
ಗಲಾಟೆಯಲ್ಲಿ ಬಿಜೆಪಿ ಕಾರ್ಯಕರ್ತರಾದ ಮುಬಾರಕ್ ಪಾಷಾ ಮತ್ತು ನಜೀರ್ ಎಂಬವರಿಗೆ ಗಾಯವಾಗಿದೆ. ಜೆಡಿಎಸ್ ಕಾರ್ಯಕರ್ತರಾದ ಮುನ್ನಾ, ಸೌಕತ್, ರಿಯಾಜ್ ಎನ್ನುವವರು ಹಲ್ಲೆ ನಡೆಸಿದವರು ಎಂದು ತಿಳಿದು ಬಂದಿದೆ.
ತುಮಕೂರಿನ ಹೆಗ್ಗೆರೆಯಲ್ಲಿ ಈ ಘಟನೆ ನಡೆದಿದೆ. ಮುಬಾರಕ್ ಪಾಷಾ ತಾಯಿ ಹಸಿನಾ ಅವರು ಹೆಗ್ಗೆರೆ ಗ್ರಾಮ ಪಂಚಾಯತಿ ಜೆಡಿಎಸ್ ಬೆಂಬಲಿತ ಸದಸ್ಯೆಯಾಗಿದ್ದಾರೆ. ಅವರನ್ನು ಗ್ರಾಮ ಪಂಚಾಯತ್ ಸದಸ್ಯೆ ಮಾಡದ ಹಿನ್ನೆಲೆಯಲ್ಲಿ ಮುಬಾರಕ್ ಪಾಷಾ ಕುಟುಂಬ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ.
ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy