ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಇಲ್ಲಿನ ನಾಗರಿಕರು ಬೆಚ್ಚಿ ಬಿದ್ದಿದ್ದಾರೆ.
ಲಕ್ನೋ-ಗೋರಖ್‌ಪುರ ಹೆದ್ದಾರಿಯಲ್ಲಿ ಟ್ರಕ್ ವೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದರ್ಶನ್ ನಗರದ ಜಿಲ್ಲಾಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿದೆ. ಅಯೋಧ್ಯೆಯಿಂದ ಬರುತ್ತಿದ್ದ ಖಾಸಗಿ ಬಸ್ ಅಂಬೇಡ್ಕರ್ ನಗರಕ್ಕೆ ತೆರಳಲು ಹೆದ್ದಾರಿಯಲ್ಲಿ ತಿರುವು ಪಡೆಯಲು ಯತ್ನಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಮುಂದೆ ಬರುತ್ತಿದ್ದ ಲಾರಿ ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


