ನಮ್ಮತುಮಕೂರು ವಿಶೇಷ ಸುದ್ದಿ
ತುಮಕೂರು : ಸಿದ್ದಗಂಗಾ ಮಠ ದಲ್ಲಿ ನಡೆಯುತ್ತಿರುವ ಸಭಾ ಕಾರ್ಯಕ್ರಮದಲ್ಲಿ ಮಠದ ಉತ್ತರಾಧಿಕಾರಿಗೆ ನೂತನ ಅಭಿದಾನ ನೀಡಲಾಗಿದ್ದು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರವಸ್ವಾಮೀಜಿ(ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್) ಎಂದು ಘೋಷಣೆ ಮಾಡಲಾಯಿತು.
ಅದೇ ರೀತಿ ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮೀಜಿ(ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಸದಾಶಿವ ಸ್ವಾಮೀಜಿ( ಪೂರ್ವಾಶ್ರಮದ ಹೆಸರು ಗೌರೀಶ್ ಕುಮಾರ್) ಎಂದು ಸಭೆಯಲ್ಲಿ ವಿವಿಧ ಮಠಾಧ್ಯಕ್ಷರು ಹಾಗೂ ಮಠದ ಪ್ರಮುಖರು ಘೋಷಿಸಿದರು.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿತ್ತು. ನೂತನವಾಗಿ ಆಯ್ಕೆಯಾಗಿರುವ ಮೂವರಿಗೂ ಇಂದು ಉತ್ತರಾಧಿಕಾರಿ ಪಟ್ಟಾಭಿಷೇಕ ಮಾಡಲಾಯಿತು.
ಸಿದ್ದಗಂಗಾ ಮಠದ ಆಡಳಿತ ಮಂಡಳಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಶ್ರೀ ಮಠದ ಭಕ್ತಾದಿಗಳು, ಸಾರ್ವಜನಿಕರು ಹಾಗೂ ಹಿತೈಷಿಗಳು ಭಾಗಿಯಾಗಿದ್ದರು.
ಬೆಳಿಗ್ಗೆಯಿಂದಲೇ ಶಿವಕುಮಾರ ಶ್ರೀ ಗಳ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಆರಂಭಿಸಲಾಯಿತು. ವಿಶೇಷ ಪೂಜೆಯಲ್ಲಿ ಸಿದ್ದಲಿಂಗ ಸ್ವಾಮೀಜಿ, ಸೇರಿ ಅನೇಕ ಮಠಾಧೀಶರುಗಳು ಭಾಗಿಯಾಗಿದ್ದರು. ಬೆಳಗಿನ ಜಾವದಿಂದ ಆರಂಭವಾದ ಪೂಜೆ ಪುರಸ್ಕಾರ ನಡೆಯಿತು. ಸಿದ್ದಗಂಗಾ ಮಠದ ಜಂಗಮಪಟ್ಟಾಧಿಕಾರ ಕಾರ್ಯಕ್ರಮವನ್ನೂ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಸುತ್ತೂರು ಶ್ರೀ ಗಳು ಉದ್ಘಾಟಿಸಿದರು,
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy