ಬೆಂಗಳೂರು ಗ್ರಾಮಾಂತರ : ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾ ಗಿದ್ದಾರೆಂದು ಹೇಳಲಾಗಿದೆ ಈ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆ ಮಾಕಳಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಬಸ್ ಚಾಲಕನಿಗೆ ನಿಯಂತ್ರಣ ಸಿಗದೆ ಬಸ್ ಪಲ್ಟಿ ಯಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.ಅಷ್ಟೇ ಅಲ್ಲದೇ ಬಸ್ ಪಲ್ಟಿಯಾಗಿದ್ದಕ್ಕೆ ಪ್ರಯಾಣಿಕರೆಲ್ಲರೂ ಹೆದರಿ ಕಂಗಾಲಾಗಿದ್ದಾರೆ. ಘಟನಾಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


