ದೆಹಲಿ: ಅಪಾರ್ಟ್ಮೆಂಟ್ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ . ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ.
ಮೊದಲ ಮಹಡಿಯ ಅಪಾರ್ಟ್‌ಮೆಂಟ್‌ನ ಬಾಗಿಲಿಗೆ ಎರಡು ಬಾರಿ ಗುಂಡು ಹಾರಿಸಿದ ಆರೋಪಿಗಳು ನೆಲ ಅಂತಸ್ತಿನ ಕಡೆಗೆ ಪರಾರಿಯಾಗಿದ್ದರು. ಮುಸುಕುಧಾರಿಗಳು ಪರಾರಿಯಾಗುವ ಮೊದಲು ನೆಲ ಮಹಡಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್‌ನ ಕಿಟಕಿಯ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


