ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ.
ಕೌಶಲ್ಯ(27) ಮೃತ ಮಹಿಳೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಸುಕೇಶ್ ಎಂಬುವರನ್ನು ಪ್ರೀತಿಸುತ್ತಿದ್ದರು.
5 ತಿಂಗಳ ಹಿಂದೆ ಪ್ರೇಮಿಗಳು ಮದುವೆಯಾಗಿದ್ದರು. ಮದುವೆ ನಂತರ ಪತಿ ಸುಕೇಶ್ ಅವರಿಗೆ ಅಕ್ರಮ ಸಂಬಂಧ ಇರುವ ವಿಚಾರ ಕೌಶಲ್ಯ ಅವರಿಗೆ ತಿಳಿದಿತ್ತು. ಇದನ್ನು ಸಾಕ್ಷಿ ಸಮೇತೆ ಕೌಶಲ್ಯ ಪತ್ತೆಹಚ್ಚಿದ್ದರು. ಪತಿಯ ಈ ಅಕ್ರಮ ಸಂಬಂಧದಿಂದ ಬೇಸತ್ತ ಕೌಶಲ್ಯ 3 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಕೂಡಲೆ ಅವರನ್ನು ಖಾಸಗಿ ಆಸ್ಪೆತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


