ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆಲುವು ಸಾಧಿಸಿ ಸರ್ಕಾರ ರಚಿಸಲು ಶತಾಯ ಗತಾಯವಾಗಿ ಪ್ರಯತ್ನಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರಿಗೆ ಶಕ್ತಿ ತುಂಬಲು ಹೈಕಮಾಂಡ್ ನಾಯಕರು ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ಹೌದು, ಏಪ್ರಿಲ್ 25ರಂದು ಪ್ರಿಯಾಂಕಾ ಗಾಂಧಿ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲೆಯ ಟಿ.ನರಸೀಪುರ ಕ್ಷೇತ್ರದ ಹೆಳವರಹುಂಡಿಯಲ್ಲಿ ಮಧ್ಯಾಹ್ನ 12ರಿಂದ 1 ಗಂಟೆವರೆಗೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ನಂತರ ಪ್ರಿಯಾಂಕಾ ಗಾಂಧಿ, ಮಧ್ಯಾಹ್ನ 2.30ಕ್ಕೆ ಹನೂರು ಕ್ಷೇತ್ರಕ್ಕೆ ತೆರಳಲಿದ್ದಾರೆ. ಅಲ್ಲಿ ಗೌರಿಶಂಕರ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 4 ಗಂಟೆವರೆಗೆ ಮಹಿಳೆಯರ ಜೊತೆ ಸಂವಾದ ನಡೆಸಲಿದ್ದಾರೆ.
ಸಂವಾದ ಕಾರ್ಯಕ್ರಮದ ಬಳಿಕ ಪ್ರಿಯಾಂಕಾ ಗಾಂಧಿ ಅವರು 4.15ಕ್ಕೆ ಕೆ.ಆರ್.ನಗರಕ್ಕೆ ತೆರಳಲಿದ್ದಾರೆ. ಸಂಜೆ 5.30ರಿಂದ 6.30ರವರೆಗೆ ಅಲ್ಲಿ ನಡೆಯುವ ರೋಡ್‌ಶೋನಲ್ಲಿ ಭಾಗಿಯಾಗಲಿದ್ದಾರೆ. ತೋಪಮ್ಮನ ದೇವಸ್ಥಾನದಿಂದ ಸುಮಾರು 2 ಕಿ.ಮೀ. ವರೆಗೆ ಈ ರೋಡ್ ಶೋ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA