ದಾವಣಗೆರೆ: ಬಿಜೆಪಿಗೆ ವೀರಶೈವ ಮತಗಳು ಕೈಬಿಡುತ್ತವೆ ಎಂಬ ಆತಂಕ ಇಲ್ಲ, ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಈ ವರ್ಷ ಅದರ ಸರಾಸರಿ ಹೆಚ್ಚಾಗುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ದಾವಣಗೆರೆಯಲ್ಲಿ ಮಾತನಾಡಿದ ಅವರು ಸವದಿ ಶೆಟ್ಟರ್ ಹೋಗಿರುವುದರಿಂದ ಲಿಂಗಾಯತ ಮತದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದರು.
ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಹೇಳಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ, ಅವರ ಹೇಳಿಕೆ ನಾವು ಅಲ್ಲಗಳೆದಿಲ್ಲ. ರಾಹುಲ್ ಗಾಂಧಿಯವರು ಕರ್ನಾಟಕಕ್ಕೆ ಬಂದಷ್ಟು ಬಿಜೆಪಿಗೆ ಲಾಭವೇ ಅಗುತ್ತೆ ಎಂದರು. ರಾಹುಲ್ ಗಾಂಧಿ ನಿನ್ನೆ ಕೂಡಲಸಂಗಮಕ್ಕೆ ಹೋಗಿದ್ದು ತೋರಿಕೆಗಾಗಿ ವಿಭೂತಿ ಹಚ್ಚಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು.
ಈ ಬಾರಿ 19 ರಿಂದ 30 ವರ್ಷದ ಯುವಕರು ಬಿಜೆಪಿ ಪಕ್ಷದ ಪರವಾಗಿದ್ದಾರೆ. ಹೊಸ ಬದಲಾವಣೆ ಬಯಸಿ ಯುವಕರು ಬಿಜೆಪಿ ಕಡೆ ಬರುತ್ತಿದ್ದಾರೆ ಎಂದು ಹೇಳಿದರು.
ಇನ್ನು ಡಿಕೆಶಿ ವಿಚಾರವಾಗಿ ಮಾತನಾಡಿದ ಅವರು, ಡಿಕೆಶಿಯವರು ಬಿಜೆಪಿಯವರ ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಕುಟುಕಿದರು.
ರಾಜ್ಯಾದ್ಯಂತ ಈಗಾಗಲೇ ಪ್ರವಾಸ ಪ್ರಚಾರಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ . ಹರಿಹರ, ಕುಂದಗೋಳ, ಬೆಳಗಾವಿ, ಕಲ್ಯಾಣ ಕರ್ನಾಟಕ ಹೀಗೆ ಹಂತ ಹಂತವಾಗಿ ಪ್ರವಾಸ ಕೈಗೊಂಡಿದ್ದೇವೆ. ಜನ ಬಹಳ ಗಾಢವಾಗಿ ವಿಚಾರ ಮಾಡುವ ಮೂಲಕ ಒಂದು ನಿರ್ಧಾರಕ್ಕೆ ಬರುತ್ತಿದ್ದಾರೆ. ಯಾರು ಜನರ ವಿಶ್ವಾಸ ಗಳಿಸಿದ್ದಾರೆ ಅವರಿಗೆ ಜನ ಆಶೀರ್ವಾದ ಮಾಡಲಿದ್ದು, ನಾವು ಅಭಿವೃದ್ಧಿ ಕೆಲಸಗಳಿಂದ ಜನರ ಮನ ಗೆದ್ದಿದ್ದೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


