ಮೈಸೂರು: ಖಂಡಿತಾ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ನಾನು ಸಿಎಂ ಆಗಬೇಕೆಂದು ಕ್ಷೇತ್ರದಲ್ಲಿ ಮಾತ್ರ ಕೂಗು ಕೇಳಿಬರುತ್ತಿದೆ. ರಾಜ್ಯದೆಲ್ಲೆಡೆ ಈ ಕೂಗು ಕೇಳಿದಾಗ ಸಿಎಂ ಮಾಡುವಂತೆ ಕೇಳುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಜಿಲ್ಲೆಯಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ವ್ಯಭಿಚಾರನಾ ಎಂದು ಪ್ರಶ್ನಿಸಿದರು. ಇದನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಬೇಕು. ಇದರ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಕಿಡಿಕಾರಿದರು.
ಲಿಂಗಾಯತ ಡ್ಯಾಂ ಒಡೆದಿರುವ ಹೇಳಿಕೆ ವಿಚಾರವಾಗಿ ಮಾತನಾಡಿ ಅವರು, ಇದು ಕಾಂಗ್ರೆಸ್‌ಗೆ ರಾಜಕೀಯ ವೃತ್ತಿ. ಅವರದ್ದು ಬರೀ ಒಡೆಯುವ ಕೆಲಸ. ಹಿಂದೆ ವೀರಶೈವ ಲಿಂಗಾಯತ ಹೆಸರಲ್ಲಿ ಒಡೆದು ಅದನ್ನು ಅನುಭವಿಸಿದ್ದರು. ನಾವು ಲಿಂಗಾಯತರ ಡ್ಯಾಂನ್ನು ಗಟ್ಟಿ ಮಾಡಿದ್ದೇವೆ. ಬೇರೆ ಬೇರೆ ಸಮುದಾಯದವನ್ನು ಸೇರಿಸಿಕೊಂಡು ಡ್ಯಾಂ ಗಟ್ಟಿ ಮಾಡಿದ್ದೇವೆ. ಹಿಂದುತ್ವದ ಡ್ಯಾಂನ್ನು ಗಟ್ಟಿ ಮಾಡಿ ಎತ್ತರಿಸಿದ್ದೇವೆ. ಚುನಾವಣೆಯಲ್ಲಿ ಮುಳುಗಿದಾಗ ನಿಮಗೆ ಗೊತ್ತಾಗುತ್ತದೆ. ಕಾಂಗ್ರೆಸ್ ಮುಳುಗುವುದು ನಿಶ್ಚಿತ ಎಂದು ವಾಗ್ದಾಳಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


