ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಇದನ್ನು ಸಂವಿಧಾನದ 200ನೇ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ತೆಲಂಗಾಣ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ.
ತೆಲಂಗಾಣ ವಿಧಾನಸಭೆ ಅಂಗೀಕರಿಸಿರುವ ಹತ್ತು ವಿಧೇಯಕಗಳ ಕುರಿತು ತಕ್ಷಣ ನಿರ್ಧಾರ ಕೈಗೊಳ್ಳುವಂತೆ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರಿಗೆ ಸೂಚಿಸಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠವೂ ಗಮನಿಸಿದೆ.
ರಾಜ್ಯಪಾಲರು ಎಲ್ಲ ವಿಧೇಯಕಗಳನ್ನು ಅಂಗೀಕರಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ‘ಸಾಧ್ಯವಾದಷ್ಟು ಬೇಗ ನಿರ್ಧಾರ ಕೈಗೊಳ್ಳಿ’ ಎಂಬ ಸಾಂವಿಧಾನಿಕ ನಿರ್ದೇಶನ ಮಹತ್ವದ್ದಾಗಿದ್ದು, ಸಂಬಂಧಪಟ್ಟವರು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


