ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ 2 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ .
ಏಪ್ರಿಲ್ 24 ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಶಿಕ್ಷಕರು ರಾಜ್ಯ ವಿಧಾನಸಭಾ ಚುನಾವಣೆ ಕರ್ತವ್ಯದಲ್ಲಿಯೂ ಹಾಜರಾಗಬೇಕಿದೆ. ಈ ನಡುವೆ ದ್ವಿತೀಯ ಪಿಯುಸಿಯಂತೆ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಕೂಡ ಆದಷ್ಟು ಬೇಗನೆ ಪ್ರಕಟಿಸುವ ನಿಟ್ಟಿನಲ್ಲಿ ಮಂಡಳಿ ಕಾರ್ಯನಿರ್ವಹಿಸುತ್ತಿದೆ. ಚುನಾವಣಾ ಪರಿಸ್ಥಿತಿ ನೋಡಿಕೊಂಡು ಫಲಿತಾಂಶವನ್ನು ಪ್ರಕಟಿಸುವುದಾಗಿ ಮಂಡಳಿ ತಿಳಿಸಿದೆ.
ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾಂಶ ವನ್ನು ಮೊಬೈಲ್ ನಲ್ಲಿ ನೋಡುವುದು ಹೇಗೆ?
ಮೊದಲು ನೀವು ನಿಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ ಅಲ್ಲಿ SSLC Result App ಡೌನ್ಲ್ಡೋಡ್ ಮಾಡಿ ನಂತರ ಕರ್ನಾಟಕ ಎಸ್ಸೆಸ್ಸೆಲ್ಸಿ ಫಲಿತಾಂಶದ ವೆಬ್ಸೈಟ್ karresults.nic.in ಮೇಲೆ ಕ್ಲಿಕ್ ಮಾಡಬೇಕು.
ನಂತರ ಅಲ್ಲಿ ನೀವು “sslc result 2023“ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ
ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಸಬ್ಮಿಟ್ ಕೊಟ್ಟ ಮೇಲೆ ನಿಮ್ಮ ಫಲಿತಾಂಶವು ಬರುತ್ತದೆ.
ಈ ರೀತಿಯಾಗಿ ನಿಮ್ಮ ಮನೆಯಲ್ಲೆ ಕುಳಿತು ಮೊಬೈಲ್ ನಲ್ಲೇ ನಿಮ್ಮ sslc ಫಲಿತಾಂಶವನ್ನು ಅನ್ನು ನೋಡಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


